alex Certify ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ FD ಅವಧಿ 3 ವರ್ಷಕ್ಕೆ ಇಳಿಸಲು ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ FD ಅವಧಿ 3 ವರ್ಷಕ್ಕೆ ಇಳಿಸಲು ಮನವಿ

ನವದೆಹಲಿ: ತೆರಿಗೆ ವಿನಾಯಿತಿ ನೀಡುವ ಸ್ಥಿರ ಠೇವಣಿ ಯೋಜನೆ ಅವಧಿಯನ್ನು ಮೂರು ವರ್ಷಕ್ಕೆ ಇಳಿಕೆ ಮಾಡಬೇಕೆಂದು ಭಾರತೀಯ ಬ್ಯಾಂಕುಗಳ ಸಂಘದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಈ ಸಲದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಭಾರತೀಯ ಬ್ಯಾಂಕುಗಳ ಮನವಿಯನ್ನು ಪರಿಗಣಿಸಿ ತೆರಿಗೆ ವಿನಾಯಿತಿ FD ಯೋಜನೆ ಅವಧಿಯನ್ನು ಮೂರು ವರ್ಷಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಆದಾಯ ತೆರಿಗೆ ಕಾಯ್ದೆ 1961 ಸೆಕ್ಷನ್ 80c ಅನ್ವಯ 5 ವರ್ಷಗಳ FD ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿದರೆ ಗರಿಷ್ಠ 1.5 ಲಕ್ಷ ರೂಪಾಯಿವರೆಗೆ ಮಾತ್ರ ತೆರಿಗೆ ವಿನಾಯಿತಿ ಪಡೆಯಬಹುದು.

ಪ್ರಸ್ತುತ ಮಾರುಕಟ್ಟೆಯಲ್ಲಿ ಈಕ್ವಿಟಿ ಆಧಾರಿತ ಉಳಿತಾಯ ಯೋಜನೆಗಳು ಇರುವುದರಿಂದ ತೆರಿಗೆ ವಿನಾಯಿತಿ ನೀಡುವ 5 ವರ್ಷಗಳ ಸ್ಥಿರ ಠೇವಣಿ ಯೋಜನೆ ಆಕರ್ಷಕವಾಗಿಲ್ಲ. ಹೀಗಾಗಿ ಅವಧಿಯನ್ನು ಮೂರು ವರ್ಷಕ್ಕೆ ಇಳಿಕೆ ಮಾಡಬೇಕೆಂದು ಭಾರತೀಯ ಬ್ಯಾಂಕುಗಳ ಸಂಘ ಮನವಿ ಮಾಡಿದೆ. ಇದರಿಂದ ಸ್ಥಿರ ಠೇವಣಿ ಯೋಜನೆ ಹೆಚ್ಚು ಜನರನ್ನು ಆಕರ್ಷಿಸಲಿದೆ. ಅಲ್ಲದೇ,  ಬ್ಯಾಂಕುಗಳಲ್ಲಿ ಹೂಡಿಕೆ ಜಾಸ್ತಿಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...