ಹೊಸ ಮನೆ ಹಾಗೂ ಕಾರು ಖರೀದಿ ಬಹುತೇಕ ಎಲ್ಲರ ಕನಸು. ಆದ್ರೆ ಹಣಕಾಸಿನ ಸಮಸ್ಯೆಯಿಂದಾಗಿ ಅನೇಕರು ಹೊಸ ಕಾರು ಖರೀದಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೆ ಮುಂದಾಗ್ತಾರೆ. ನೀವು ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವ ಆಲೋಚನೆಯಲ್ಲಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ದೇಶದ 20 ಬ್ಯಾಂಕ್ ಗಳು ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೂ ಸಾಲ ನೀಡುತ್ತವೆ.
ಇಎಂಐ ಮೂಲಕ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡ್ತೀರಾ…? ಹಾಗಾದ್ರೆ ಓದಿ ಈ ಸುದ್ದಿ
ಕೊರೊನಾ ಸಂದರ್ಭದಲ್ಲಿ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದೆ. ಅನೇಕರು ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೆ ಒಲವು ತೋರಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್ ಗಳು ಸೆಕೆಂಡ್ ಹ್ಯಾಂಡ್ ಕಾರುಗಳಿಗೂ ಬ್ಯಾಂಕ್ ಸಾಲ ನೀಡುತ್ತಿವೆ. 5 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದಾಗಿದೆ. ಕಾರು ಖರೀದಿ ಹಾಗೂ ಸಾಲ ಪಡೆಯುವ ಮೊದಲು ಯಾವ ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರಕ್ಕೆ ಸಾಲ ಸಿಗ್ತಿದೆ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಬ್ಯಾಂಕ್ ಗಳು ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೆ ಮೂರು ವರ್ಷದಿಂದ ಐದು ವರ್ಷದವರೆಗೆ ಸಾಲ ನೀಡುತ್ತದೆ.
ಕೆನರಾ ಬ್ಯಾಂಕ್ ಶೇಕಡಾ 7.30ರ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಬ್ಯಾಂಕ್ ಆಫ್ ಇಂಡಿಯಾ ಶೇಕಡಾ 7.45ರ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಪಂಜಾಬ್ ಬ್ಯಾಷನಲ್ ಬ್ಯಾಂಕ್ ಶೇಕಡಾ 8.30ರ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಶೇಕಡಾ 8.55ರ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಸೆಂಟ್ರಲ್ ಬ್ಯಾಂಕ್ ಶೇಕಡಾ 8.80ರ ಬಡ್ಡಿ ದರದಲ್ಲಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇಕಡಾ 9.20 ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಬೇರೆ ಬೇರೆ ಬ್ಯಾಂಕ್ ಗಳ ಬಡ್ಡಿ ದರಗಳು ಬೇರೆ ಬೇರೆಯಾಗಿವೆ.