ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಣ್ಣುಮಕ್ಕಳ ಶಿಕ್ಷಣ ಸೇರಿದಂತೆ ಅವರ ಅನುಕೂಲಕ್ಕಾಗಿ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆಯಡಿ ಸರ್ಕಾರ ಬಾಂಡ್ ಗಳನ್ನು ನೀಡಿದೆ.
ಮೂರಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು ಹೊಂದಿದವರಿಂದ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ. 2014 ರವರೆಗೆ ಬಾಂಡ್ ಪಡೆದುಕೊಂಡ ಫಲಾನುಭವಿಗಳ ಗುರುತಿಸಿ ಸಮೀಕ್ಷೆ ಕೈಗೊಳ್ಳಲಾಗ್ತಿದೆ.
ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಮಾಡಿರುವ ಸಂದರ್ಭದಲ್ಲಿ ಮೂವರು ಮಕ್ಕಳು ಇದ್ದು, ನಂತರದಲ್ಲಿ ಹೆಚ್ಚಿನ ಮಕ್ಕಳನ್ನು ಹೊಂದಿದ ಕುಟುಂಬದವರಿಗೆ ಸಮಸ್ಯೆ ಎದುರಾಗಿದೆ. ಮೂರಕ್ಕಿಂತ ಹೆಚ್ಚು ಮಕ್ಕಳಿರುವ ಫಲಾನುಭವಿಗಳನ್ನು ಗುರುತಿಸಿ ಬಾಂಡ್ ವಾಪಸ್ ಪಡೆಯಲು ಸರ್ಕಾರ ಸೂಚಿಸಿದ್ದು, ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.