ರಾಯಚೂರು: ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಯಚೂರಿನ ಲಿಂಗಸುಗೂರಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ್ ಮೇಟಿ ಎಂಬುವವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ಲಾಡ್ಜ್ ನಿಂದ 10ಕ್ಕೂ ಹೆಚ್ಚು ಜನರ ತಂಡ ಅಮರೇಶ್ ಅವರನ್ನು ಅಪಹರಿಸಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಅಮರೇಶ್ ಒತ್ತಾಯಪೂರ್ವಕವಾಗಿ ರಾಜೀನಾಮೆ ಸಲ್ಲಿಸಿದ್ದರು. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.