ಕೊರೊನಾ ಲಾಕ್ಡೌನ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸ್ವಾವಲಂಬಿ ಭಾರತ ನಿರ್ಮಾಣದತ್ತ ಹೆಜ್ಜೆ ಇಟ್ಟಿದ್ದು ಇದಕ್ಕೆ ಪೂರಕವಾಗಿ ಹಲವು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.
ತೈಲವನ್ನು ಭಾರತ ಆಮದು ಮಾಡಿಕೊಳ್ಳುತ್ತಿರುವುದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ನಿಗದಿಪಡಿಸುವ ಕಾರಣ ಇದರ ಬೆಲೆ ಮುಗಿಲು ಮುಟ್ಟಿದೆ. ಇದು ಸಹಜವಾಗಿಯೇ ಇತರೆ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವ ಮೂಲಕ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಸೌರಶಕ್ತಿ ಆಧಾರಿತ ವಾಹನಗಳ ತಯಾರಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದೆ. ಈ ವಾಹನಗಳ ಉತ್ಪಾದನಾ ಘಟಕ ಸ್ಥಾಪಿಸುವವರಿಗೆ ತೆರಿಗೆ ವಿನಾಯಿತಿ, ಸಬ್ಸಿಡಿ, ಅಗ್ಗದ ದರದಲ್ಲಿ ಸಾಲ ಮತ್ತು ಭೂಮಿಯನ್ನು ಒದಗಿಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಸೌರಶಕ್ತಿ ವಾಹನಗಳ ಬಳಕೆ ಆರಂಭವಾದರೆ ತೈಲಕ್ಕಾಗಿ ವಿದೇಶಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.