ಬೆಂಗಳೂರು : ಎಂಎಲ್ ಸಿ ಸಿಟಿ ರವಿ ಬಳಸಿದ್ದಾರೆ ಎನ್ನಲಾದ ಅವಾಚ್ಯ ಶಬ್ದದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಗುದ್ದಾಟಕ್ಕೆ ಕಾರಣವಾಗಿದೆ.
ಎಂಎಲ್ ಸಿ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಫೈಟ್ ಮುಂದುವರೆದಿದ್ದು, ಸಿ.ಟಿ ರವಿ ಬಳಸಿದ ಅವಾಚ್ಯ ಶಬ್ದದ ಆಡಿಯೋ, ವಿಡಿಯೋ ಸಾಕ್ಷಿ ನನ್ನ ಬಳಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಅವರ ಬಾಯಲ್ಲಿ ಇಂತಹ ಮಾತು ಬರುವುದು ನಾಚಿಕೆಗೇಡಿತನದ್ದು , ಅವರು ಬಳಸಿದ ಪದವನ್ನು ಇತರ ವಿಧಾನ ಪರಿಷತ್ ಸದಸ್ಯರು ಕೇಳಿಸಿಕೊಂಡಿದ್ದಾರೆ ಎಂದರು.ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. .ಆದರೆ ನ್ಯಾಯಾಂಗ ತನಿಖೆ ಯಾಕೆ ಬೇಕು..? ಬಿಜೆಪಿಯವರು ತಮ್ಮ ತಪ್ಪುಗಳನ್ನುಮುಚ್ಚಿ ಹಾಕಿಕೊಳ್ಳಲು ನ್ಯಾಯಾಂಗ ತನಿಖೆ ಕೇಳುತ್ತಿದ್ದಾರೆ ಎಂದರು.
ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದಿದ್ದಾರೆ.