alex Certify BIG NEWS: ಬೈಕ್ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಕಾರ್ಯಾಚರಣೆ ನಡೆಸಿದ್ರೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಕಾರ್ಯಾಚರಣೆ ನಡೆಸಿದ್ರೆ ಕ್ರಮ

ಬೆಂಗಳೂರು: ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆಯಿಂದ ಅನುಮತಿ ನೀಡಿಲ್ಲ. ಕಾರ್ಯಾಚರಣೆ ನಡೆಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ.

ಅನುಮತಿ ಇಲ್ಲದಿದ್ದರೂ, ಅನಧಿಕೃತವಾಗಿ ಬೈಟ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದು ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ ಆಗಿದೆ. ಸಾರ್ವಜನಿಕರು ಇಂತಹ ಬೈಕ್ ಟ್ಯಾಕ್ಸಿ ಸೇವೆ ಪಡೆಯಬಾರದು. ಮೋಟಾರು ವಾಹನ ಕಾಯ್ದೆ ಪ್ರಕಾರ ಕ್ರಮ ಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ಬಗ್ಗೆ ಕೋರ್ಟ್ನಲ್ಲಿ ಕೇಸ್ ಇದೆ. ನ್ಯಾಯಾಲಯ ಇದರ ಬಗ್ಗೆ ತೀರ್ಮಾನ ಮಾಡಲಿದೆ. ಆದರೆ ಬೈಕ್ ಜಾಸ್ತಿಯಾಗಿ ಕಾರ್ಯಾಚರಣೆಗೆ ಅವಕಾಶ ಇಲ್ಲ. ಜನರು ಯಾರೂ ಕೂಡ ಬೈಕ್ ಟ್ಯಾಕ್ಸಿ ಬಳಸಬಾರದು ಎಂದು ಸಾರಿಗೆ ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...