ನವದೆಹಲಿ: ಲೋಕಸಭೆಯಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ಮೂರು ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ.
3 ಕೃಷಿ ಮಸೂದೆಗಳು ಪಾಸಾಗಿದ್ದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಭರವಸೆ ನೀಡಿದ್ದಾರೆ. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವ್ಯವಹಾರಗಳ ಮಸೂದೆ, ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆಗಳಿಗೆ ಅನುಮೋದನೆ ದೊರೆತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಕೃಷಿಕ್ಷೇತ್ರದಲ್ಲಿ ಮಧ್ಯವರ್ತಿಗಳ ಹಾವಳಿ ತಡೆದು ರೈತರಿಗೆ ಹೊಸ ಅವಕಾಶಗಳನ್ನು ಈ ಮಸೂದೆಗಳು ಕಲ್ಪಿಸಲಿವೆ ಎಂದು ತಿಳಿಸಿದ್ದಾರೆ.
ರೈತರು ತಮ್ಮ ಉತ್ಪನ್ನಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು. ಕೃಷಿ ವಲಯ ಹೊಸ ತಂತ್ರಜ್ಞಾನದ ಲಾಭ ಪಡೆದು ಸಬಲೀಕರಣಗೊಳ್ಳಲಿದೆ. ಅಲ್ಲದೆ, ರೈತರು ಕೃಷಿ ಉತ್ಪನ್ನಗಳನ್ನು ಹೆಚ್ಚಿನ ಬೆಲೆಗೆ ದೇಶದ ಯಾವುದೇ ಭಾಗದಲ್ಲಿ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.