
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋತಿಗಳ ಕಾಟ ಹೆಚ್ಚಾಗಿದ್ದು, ಮನೆಯಲ್ಲಿ ಮಲಗಿದ್ದ 13 ದಿನದ ಮಗುವಿನ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಕೋಲಮನಹಳ್ಳಿಯ ಮಂಜುಳಾ ಹಾಗೂ ಸಿದ್ದೇಶ್ ದಂಪತಿಯ 13 ದಿನದ ಮಗುವಿನ ಮೇಲೆ ಕೋತಿ ದಾಳಿ ಮಾಡಿದ್ದು, ಕೋತಿ ದಾಳಿಯಿಂದ ಮಗುವಿನ ಹಣೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಗಾಯಗೊಂಡಿರುವ ಮಗುವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತೊರೆಕೋಮನಹಳ್ಳಿಯಲ್ಲಿ ಕೋತಿಗಳ ಕಾಟ ಹೆಚ್ಚಾಗಿದ್ದು, ಕೋತಿ ಕಾಟ ತಡೆಯುವಂತೆ ಅರಣ್ಯಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.