ಬೆಂಗಳೂರು : ರಾಜ್ಯದಲ್ಲಿ ವ್ಯಾಪಕ ಆಕ್ರೋಶ, ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಇದೀಗ ಪ್ರಕರಣದಲ್ಲಿ ಸಂತೋಷ್ ರಾವ್ ನೇ ಆರೋಪಿ ಎಂದು ಸಿಬಿಐ ಮೇಲ್ಮನವಿ ಸಲ್ಲಿಸಿದೆ. ನಾಲ್ಕು ತಿಂಗಳ ಬಳಿಕ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟಿನಲ್ಲಿ ತೀರ್ಪು ಮರು ಪರಿಶೀಲನೆ ಮಾಡುವಂತೆ ಸಿಬಿಐ ಮೇಲ್ಮನವಿ ಸಲ್ಲಿಸಿದೆ.
ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿತ್ತು.
ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ 2012 ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ನಂತರ ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಅನುಮಾನದ ಮೇರೆಗೆ ಸಮೀಪದ ಮನೆಯಲ್ಲಿ ವಾಸವಿದ್ದ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿತ್ತು. ಇದೀಗ ತೀರ್ಪು ಮರು ಪರಿಶೀಲನೆ ಮಾಡುವಂತೆ ಸಿಬಿಐ ಮೇಲ್ಮನವಿ ಸಲ್ಲಿಸಿದೆ.