ಬೆಂಗಳೂರು : ಬೆಂಗಳೂರಲ್ಲಿ ಪಟಾಕಿ ಮಾರಾಟ ಮಾಡಲು ಪೊಲೀಸ್ ಇಲಾಖೆ ಅನುಮತಿ ನೀಡಿದ್ದು, 320 ಅಂಗಡಿಗಳಿಗೆ ಮಾತ್ರ ಅವಕಾಶ ನೀಡಿದೆ.
ಬೆಂಗಳೂರಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ನಡೆದ ಪಟಾಕಿ ಗೋದಾಮು ಅಗ್ನಿ ಅವಘಡ ಹಿನ್ನೆಲೆ ರಾಜ್ಯ ಸರ್ಕಾರ ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧ ಮಾಡಿತ್ತು. ಇದೀಗ ಬೆಂಗಳೂರಲ್ಲಿ 320 ಪಟಾಕಿ ಅಂಗಡಿಗಳಿಗೆ ನಗರ ಪೊಲೀಸರು ಅನುಮತಿ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಪಟಾಕಿ ಬ್ಯಾನ್ ಆದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೋಗಿ ಪಟಾಕಿ ಮಾರಾಟಕ್ಕೆ ಮಾರಾಟಗಾರರು ನಿರ್ಧರಿಸಿದ್ದಾರೆ.
ಇನ್ನೂ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆ ನಿಯತ್ರಿಸುವ ಕುರಿತು ಕೆಲವು ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಪಟಾಕಿಗಳ ಸಿಡಿತದಿಂದ ಉಂಟಾಗುವ ಶಬ್ಧ ಹಾಗು ಸಾರ್ವಜನಿಕ ಆಸ್ತಿ ಹಾಗೂ ಆರೋಗ್ಯ ಸಂರಕ್ಷಣೆ ಹಿನ್ನೆಲೆಯಲ್ಲಿ ಹಲವು ನಿಯಮ ಜಾರಿ ಮಾಡಿದೆ. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಗೆ ನಿಷೇಧ ಹೇರಿದೆ.