ನವದೆಹಲಿ: ಮುಂದಿನ ಆದೇಶದವರೆಗೂ ಬಿಎಸ್ 4 ವಾಹನಗಳ ನೋಂದಣಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಶುಕ್ರವಾರ ಸುಪ್ರೀಂಕೋರ್ಟ್ ಬಿಎಸ್4 ವಾಹನಗಳ ನೋಂದಣಿಗೆ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.
ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಬಿಎಸ್4 ವಾಹನಗಳ ಮಾರಾಟ ಸ್ಥಗಿತವಾಗಿ ಸುಮಾರು 3600 ಕೋಟಿ ರೂಪಾಯಿ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಇದನ್ನು ಪರಿಗಣಿಸಿದ ಕೋರ್ಟ್ ಲಾಕ್ಡೌನ್ ತೆರವಾದ ಬಳಿಕ 10 ದಿನಗಳ ಕಾಲ ಬಿಎಸ್4 ವಾಹನಗಳ ಮಾರಾಟಕ್ಕೆ ಆದೇಶ ನೀಡಿತ್ತು. ಮಾರ್ಚ್ ಕೊನೆಯ ವಾರ ಮತ್ತು ನಂತರದಲ್ಲಿ ಲಾಕ್ ಡೌನ್ ನಡುವೆಯೂ ವಾಹನಗಳನ್ನು ಮಾರಾಟ ಮಾಡಿದ್ದ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.