ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಮಾಧ್ಯಮ ವರ್ಗದವರನ್ನು ಗುರಿಯಾಗಿಸಿಕೊಂಡು ಹಲವು ಕೊಡುಗೆಗಳನ್ನು ನೀಡುವ ಸಾಧ್ಯತೆ ಇದೆ. ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ, 80 ಸಿ ಅಡಿ ವಿನಾಯಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಸ್ಟ್ಯಾಂಡರ್ಡ್ ಡಿಡಕ್ಷನ್ ಕ್ಯಾಪಿಟಲ್ ಗೇನ್ಸ್ ತೆರಿಗೆ ನೀತಿಯನ್ನು ಸರಳಗೊಳಿಸಬಹುದು ಎಂದು ಹೇಳಲಾಗಿದೆ.