ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿಲಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಫಲಿತಾಂಶ ಬಹುತೇಕ ನಿಚ್ಚಳವಾಗಿ ಹೊರಬೀಳಲಿದೆ.
ನ.13ರಂದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ.
ಮೊದಲ ಸುತ್ತಿನಲ್ಲಿ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. 200ಕ್ಕೂ ಹೆಚ್ಚು ಮತಗಳಿಂದ ನಿಖಿಲ್ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹಿನ್ನಡೆಯಲ್ಲಿದ್ದಾರೆ.
ಶಿಗ್ಗಾಂವಿಯಲ್ಲಿ ಎನ್ ಡಿಎ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಗೆ ಹಿನ್ನಡೆಯಾಗಿದೆ.
ಇನ್ನು ಸಂಡೂರಿನಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮುನ್ನಡೆಸಾಧಿಸಿದ್ದಾರೆ. ಎನ್ ಡಿಎ ಅಭ್ಯರ್ಥಿ ಬಂಗಾರು ಹನುಮಂತು ಹಿನ್ನಡೆಯಲಿದ್ದಾರೆ.