alex Certify ‘ಅಂಚೆ’ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ 820 ಕೋಟಿ ರೂ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಂಚೆ’ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ 820 ಕೋಟಿ ರೂ.

ನವದೆಹಲಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ ಗೆ 820 ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಈ ಬೆಂಬಲದಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಸೇರ್ಪಡೆಗೆ ಅನುಕೂಲವಾಗಲಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ ಗೆ(ಐಪಿಪಿಬಿ) 820 ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವ ಪ್ರಸ್ತಾಪವಿದ್ದು, ಇದನ್ನು ಕ್ಯಾಬಿನೆಟ್ ಅನುಮೋದಿಸಿದೆ.

IPPB ಪ್ರಸ್ತುತ 5 ಕೋಟಿಗೂ ಹೆಚ್ಚು ಖಾತೆಗಳನ್ನು ಹೊಂದಿದೆ. ಮತ್ತು 1.36 ಲಕ್ಷ ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಅದರ ಖಾತೆದಾರರಲ್ಲಿ ಸುಮಾರು 48 ಪ್ರತಿಶತ ಮಹಿಳೆಯರಿದ್ದಾರೆ.

ಐಪಿಪಿಬಿ ಸರ್ಕಾರದ ಸಾಮಾಜಿಕ ಉದ್ದೇಶಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಬೆಂಬಲವು ಐಪಿಪಿಬಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹಣಕಾಸಿನ ಸೇರ್ಪಡೆಯ ಸರ್ಕಾರದ ಕಾರ್ಯಸೂಚಿಯನ್ನು ಮುನ್ನಡೆಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...