alex Certify ಮತ್ತೆ ವಿಶೇಷ ಪ್ಯಾಕೇಜ್: ಕೃಷಿಕರು, ಬೀದಿ ವ್ಯಾಪಾರಿಗಳು, MSME ವಲಯಕ್ಕೆ ಕೇಂದ್ರದಿಂದ ಮತ್ತೊಂದು ಭರ್ಜರಿ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ವಿಶೇಷ ಪ್ಯಾಕೇಜ್: ಕೃಷಿಕರು, ಬೀದಿ ವ್ಯಾಪಾರಿಗಳು, MSME ವಲಯಕ್ಕೆ ಕೇಂದ್ರದಿಂದ ಮತ್ತೊಂದು ಭರ್ಜರಿ ಕೊಡುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಮತ್ತು ಸಣ್ಣ ಕೈಗಾರಿಕೆಗಳ ವಲಯಕ್ಕೆ ಉತ್ತೇಜನ ನೀಡಲು ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ.

ಎಂಎಸ್ಎಂಇಗಳಿಗೆ 20 ಸಾವಿರ ಕೋಟಿ ರೂಪಾಯಿ ಅಧೀನ ಸಾಲಕ್ಕೆ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇಗಳಿಗಾಗಿ 2 ಪ್ಯಾಕೇಜ್ ಕಾರ್ಯಗತಗೊಳಿಸಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮಧ್ಯಮ ಉದ್ದಿಮೆಗಳ ವಹಿವಾಟು ಮಿತಿಯನ್ನು 250 ಕೋಟಿ ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ವಲಯಕ್ಕೆ ಉತ್ತೇಜನ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೀದಿಬದಿ ವ್ಯಾಪಾರಿಗಳಿಗೆ 10,000 ರೂಪಾಯಿ ಸಾಲ ನೀಡಲು ಯೋಜನೆ ರೂಪಿಸಲಾಗಿದೆ. ಇದರಿಂದ ಸುಮಾರು 50 ಲಕ್ಷ ಬೀದಿ ಬದಿ ವ್ಯಾಪಾರಸ್ಥರಿಗೆ ಅನುಕೂಲ ಒದಗಿಸಲಾಗುವುದು.  14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಅಲ್ಪಾವಧಿ ಬೆಳೆ ಸಾಲದ ಮರುಪಾವತಿಗೆ ಆಗಸ್ಟ್ 31 ರ ವರೆಗೆ ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...