
ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಿದೆ. ಕೆನರಾ ಬ್ಯಾಂಕ್ ರೆಪೊ ದರಕ್ಕೆ ಸಂಬಂಧಿತ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.40 ರಷ್ಟು ಇಳಿಕೆ ಮಾಡಲಾಗಿದ್ದು, ಗ್ರಾಹಕರಿಗೆ ಶೇಕಡ 6.90 ದರ ಇರುತ್ತದೆ.
ಅದೇ ರೀತಿ ಠೇವಣಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನು ಆಧರಿಸಿದ ಸಾಲದ ಬಡ್ಡಿ ದರಗಳಲ್ಲಿ ಶೇ 0.20 ರಷ್ಟು ಕಡಿತ ಮಾಡಲಾಗಿದ್ದು, ಪರಿಷ್ಕೃತ ದರಗಳು ಭಾನುವಾರದಿಂದ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.