ನವದೆಹಲಿ: ಕೆನರಾ ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರ ಪರಿಷ್ಕರಣೆ ನಿರ್ಧಾರ ಪ್ರಕಟಿಸುವ ಮೊದಲೇ ಕೆನರಾ ಬ್ಯಾಂಕ್ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.2 ರಷ್ಟು ಹೆಚ್ಚಳ ಮಾಡಲಾಗಿದೆ.
ನವೆಂಬರ್ 27 ರಿಂದ ಅನ್ವಯವಾಗುವಂತೆ ಬಡ್ಡಿದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಎರಡು ವರ್ಷಗಳಿಂದ ಮೂರು ವರ್ಷಗಳ ಒಳಗಿನ ನಿಶ್ಚಿತ ಠೇವಣಿಗೆ ಶೇಕಡ 5.2 ರಷ್ಟು ಬಡ್ಡಿ ನೀಡಲಾಗುತ್ತಿತ್ತು. ಇದನ್ನು ಶೇಕಡ 5.4 ರಷ್ಟು ಹೆಚ್ಚಳ ಮಾಡಲಾಗಿದೆ.
ಅದೇ ರೀತಿ ಮೂರು ವರ್ಷಗಳಿಂದ 10 ವರ್ಷಗಳ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಶೇಕಡ 5.3 ರಷ್ಟು ಇದ್ದು, ಅದನ್ನು ಶೇಕಡ 5.5 ರಷ್ಟು ಏರಿಕೆ ಮಾಡಲಾಗಿದೆ. ಹಿರಿಯ ನಾಗರಿಕರಿಗೆ ಶೇಕಡ 0.5 ರಷ್ಟು ಹೆಚ್ಚುವರಿ ಬಡ್ಡಿ ಸಿಗಲಿದೆ ಎಂದು ಹೇಳಲಾಗಿದೆ.