ನವದೆಹಲಿ: ಟಾಟಾ ಮೋಟಾರ್ಸ್ ಲಿಮಿಟೆಡ್ ಪ್ರಯಾಣಿಕ ವಾಹನಗಳ ಬೆಲೆಯನ್ನು ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ಶೇಕಡ 1.2 ರಷ್ಟು ಏರಿಕೆ ಮಾಡುವುದಾಗಿ ಹೇಳಿದೆ.
ಮಾರುತಿ ಸುಜುಕಿ ಇಂಡಿಯಾ ಎಲ್ಲಾ ಮಾದರಿಯ ಕಾರ್ ಗಳ ಬೆಲೆಗಳನ್ನು ಜನವರಿ 16 ರಿಂದ ಜಾರಿಗೆ ಬರುವಂತೆ ಶೇಕಡ 1.1 ರಷ್ಟು ಏರಿಕೆ ಮಾಡಿದೆ. ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಲು ವಾಹನಗಳ ಬೆಲೆ ಹೆಚ್ಚಿಸುವುದಾಗಿ ಘೋಷಿಸಿದ್ದ ಮಾರುತಿ ಸುಜುಕಿ ಏಪ್ರಿಲ್ 2023 ರಿಂದ ಹೊರ ಸೂಸುವಿಕೆ ಮಾನದಂಡಗಳಿಗೆ ಅನುಗುಣವಾಗಿ ಕಾರ್ ಮಾದರಿ ನವೀಕರಿಸಲು ಹೆಚ್ಚು ವೆಚ್ಚ ಮಾಡಬೇಕಾಗಿದೆ. ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಲು ವಾಹನ ಬೆಲೆ ಹೆಚ್ಚಿಸುವುದಾಗಿ ತಿಳಿಸಿದೆ.
ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ತನ್ನ ಪ್ರಯಾಣಿಕ ವಾಹನಗಳ ಬೆಲೆಯನ್ನು ಸರಾಸರಿ ಆಧಾರದ ಮೇಲೆ ಶೇಕಡ 1.2 ರಷ್ಟು ಏರಿಕೆ ಮಾಡುವುದಾಗಿ ಟಾಟಾ ಮೋಟಾರ್ಸ್ ತಿಳಿಸಿದೆ.