alex Certify ವ್ಯಾಪಾರಿಗಳಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿ ಶೀಘ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಾಪಾರಿಗಳಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿ ಶೀಘ್ರ

ನವದೆಹಲಿ: ಚಿಲ್ಲರೆ ವ್ಯಾಪಾರದಲ್ಲಿ ಸುಧಾರಣೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ ಕೈಗೊಂಡಿದೆ.

ಇದೇ ಮೊದಲ ಬಾರಿಗೆ ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ರಾಷ್ಟ್ರೀಯ ನೀತಿ ಘೋಷಣೆ ಮಾಡುವ ಸಾಧ್ಯತೆ ಇದೆ. ಜಿ.ಎಸ್‌.ಟಿ. ಅಡಿ ನೋಂದಾಯಿತ ವ್ಯಾಪಾರಿಗಳಿಗೆ ಅಪಘಾತ ವಿಮೆ ಜಾರಿಗೊಳಿಸಲಾಗುವುದು ಎಂದು ಕೇಂದ್ರದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಿಲ್ಲರೆ ವ್ಯಾಪಾರ ನೀತಿ ಅಡಿ ವ್ಯಾಪಾರಿಗೆ ಸುಧಾರಿತ ಮೂಲ ಸೌಕರ್ಯ ಹಾಗೂ ಹೆಚ್ಚು ಸಾಲ ಸೌಲಭ್ಯ ಕಲ್ಪಿಸಲಾಗುವುದು. ಚಿಲ್ಲರೆ ವ್ಯಾಪಾರದ ಆಧುನಿಕರಣ, ಡಿಜಿಟಲೀಕರಣ, ಸರಕು ವಿತರಣೆಗೆ ಆಧುನಿಕ ಮೂಲ ಸೌಕರ್ಯ, ಕೌಶಲ್ಯ ಅಭಿವೃದ್ಧಿಗೆ ಪ್ರೋತ್ಸಾಹ, ಕಾರ್ಮಿಕರ ಉತ್ಪಾದಕತೆ ಹೆಚ್ಚಳ, ದೂರು ಪರಿಹಾರ ವ್ಯವಸ್ಥೆ ಜಾರಿಗೊಳಿಸುವ ಸಾಧ್ಯತೆ ಇದೆ.

ಕೇಂದ್ರ ವಾಣಿಜ್ಯ ಸಚಿವಾಲಯದಿಂದ ಹಣಕಾಸು ಇಲಾಖೆ ಜೊತೆ ಸೇರಿ ನಿಯಮಗಳನ್ನು ರೂಪಿಸಲಾಗುತ್ತಿದೆ. ಚಿಲ್ಲರೆ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿ ದರಕ್ಕೆ ಸುಲಭವಾಗಿ ಸಾಲ ದೊರೆಕಿಸಿಕೊಡಲಾಗುವುದು ಎಂದು ಹೇಳಲಾಗಿದೆ.

ಭಾರತ ವಿಶ್ವದಲ್ಲಿ ಐದನೇ ಅತಿ ದೊಡ್ಡ ಚಿಲ್ಲರೆ ವ್ಯಾಪಾರ ವಲಯ ಹೊಂದಿದ ದೇಶವಾಗಿದ್ದು, ಇ- ಕಾಮರ್ಸ್ ಮಾತ್ರವಲ್ಲದೆ, ಭೌತಿಕ ವ್ಯಾಪಾರ ನಡೆಸುವವರಿಗೂ ಅನುಕೂಲವಾಗುವಂತೆ ನೀತಿ ರೂಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...