
ನವದೆಹಲಿ: ಕೇಂದ್ರ ಸರ್ಕಾರ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಉಂಡೆ ಕೊಬ್ಬರಿ ಮತ್ತು ಹೋಳು ಕೊಬ್ಬರಿ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.
ಹೋಳು ಕೊಬ್ಬರಿಗೆ ಕ್ವಿಂಟಲ್ ಗೆ 255 ರೂ., ಉಂಡೆ ಕೊಬ್ಬರಿಗೆ ಕ್ವಿಂಟಲ್ ಗೆ 400 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲು ಒಪ್ಪಿಗೆ ನೀಡಿದೆ.
2022 ನೇ ಸಾಲಿಗೆ ಉಂಡೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್ ಗೆ 11,000 ರೂ.ಗೆ ಹೆಚ್ಚಳವಾಗಿದೆ. ಹೋಳು ಕೊಬ್ಬರಿ ದರ ಕ್ವಿಂಟಲ್ ಗೆ 10,596 ರೂ.ಗೆ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.