alex Certify ಸ್ವಸಹಾಯ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: ವಾರ್ಷಿಕ 1 ಲಕ್ಷ ರೂ. ಗಳಿಸಲು ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಸಹಾಯ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: ವಾರ್ಷಿಕ 1 ಲಕ್ಷ ರೂ. ಗಳಿಸಲು ನೆರವು

ನವದೆಹಲಿ: ಸ್ವಸಹಾಯ ಸಂಘದ ಮಹಿಳೆಯರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಾರ್ಷಿಕ 1 ಲಕ್ಷ ರೂಪಾಯಿ ಗಳಿಸಲು ಸಾಧ್ಯವಾಗುವಂತಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಮಹಿಳಾ ಸ್ವಸಹಾಯ ಗುಂಪುಗಳ ವಿವಿಧ ಮಾದರಿಗಳ ಕಾರ್ಯನಿರ್ವಹಣೆ ಕುರಿತು ನಡೆಸಿದ ಅಧ್ಯಯನ ಆಧರಿಸಿ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯಗಳಿಗೆ ಸಲಹೆ ಸೂಚನೆ ನೀಡಲಾಗಿದೆ.

ಸುಮಾರು 2.5 ಕೋಟಿ ಮಹಿಳೆಯರಿಗೆ 2 ವರ್ಷಗಳ ಅವಧಿಗೆ ಈ ಕಾರ್ಯಕ್ರಮದಡಿ ನೆರವು ನೀಡಲಾಗುವುದು. ವಾರ್ಷಿಕ 1 ಲಕ್ಷ ರೂಪಾಯಿ ಗಳಿಸಲು ಸಾಧ್ಯವಾಗುವಂತೆ ನೆರವು ನೀಡಲಾಗುತ್ತದೆ. 70 ಲಕ್ಷ ಸ್ವಸಹಾಯ ಗುಂಪುಗಳನ್ನು ಸ್ಥಾಪಿಸಲಾಗಿದ್ದು, 7.7 ಮಹಿಳೆಯರು ಸದಸ್ಯರಾಗಿದ್ದಾರೆ.  ಸ್ವಸಹಾಯ ಗುಂಪುಗಳಿಗೆ ವಾರ್ಷಿಕ 80 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...