alex Certify ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಗುಡ್ ನ್ಯೂಸ್: ದೇಶಾದ್ಯಂತ 7000 ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ 800 ಕೋಟಿ ರೂ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಗುಡ್ ನ್ಯೂಸ್: ದೇಶಾದ್ಯಂತ 7000 ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ 800 ಕೋಟಿ ರೂ.

ನವದೆಹಲಿ: ದೇಶಾದ್ಯಂತ 7432 ಸಾರ್ವಜನಿಕ ವೇಗದ ಚಾರ್ಜಿಂಗ್ ಕೇಂದ್ರಗಳನ್ನು(Fast charging stations)  ಸ್ಥಾಪಿಸಲು ಕೇಂದ್ರವು FAME ಯೋಜನೆ ಹಂತ -2 ರ ಅಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ದೊಡ್ಡ ಪ್ರಮಾಣದ ಬಳಕೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರವು 2015 ರಲ್ಲಿ ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ಮ್ಯಾನುಫ್ಯಾಕ್ಚರಿಂಗ್(FAME) ಇಂಡಿಯಾ ಯೋಜನೆಯನ್ನು ರೂಪಿಸಿದೆ. ಬೃಹತ್ ಕೈಗಾರಿಕೆಗಳ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ, ತೈಲ ಮಾರುಕಟ್ಟೆ ಕಂಪನಿಗಳಿಂದ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳ ವ್ಯಾಪಕ ಜಾಲವನ್ನು ಶೀಘ್ರದಲ್ಲೇ ದೇಶಾದ್ಯಂತ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂಪನಿಗಳು ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ. ಮುಂದಿನ ವರ್ಷ ಮಾರ್ಚ್ ವೇಳೆಗೆ ಅಳವಡಿಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಪ್ರಸ್ತುತ, ದೇಶಾದ್ಯಂತ ಸುಮಾರು 6586 ಚಾರ್ಜಿಂಗ್ ಸ್ಟೇಷನ್‌ಗಳಿವೆ. ಹೊಸ 7432 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳ ಸೇರ್ಪಡೆಯು ಎಲೆಕ್ಟ್ರಿಕ್ ವೆಹಿಕಲ್ಸ್ ಚಾರ್ಜಿಂಗ್ ಇಕೋ ಸಿಸ್ಟಮ್‌ ಮಹತ್ವದ ಬೆಳವಣಿಗೆಯಾಗಿದೆ. ಈ ಕ್ರಮವು ಭಾರತದಲ್ಲಿನ ಎಲೆಕ್ಟ್ರಿಕ್ ವಾಹನಗಳ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...