ಮುಂಬೈ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂಧನ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಂತ್ ದಾಸ್ ಹೇಳಿದ್ದಾರೆ.
ತೈಲ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಸಾಧಿಸಬೇಕಾದಂತಹ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಇಂಧನ ಬೆಲೆ ಏರಿಕೆಯಿಂದ ಬೈಕ್, ಕಾರ್ ಬಳಕೆದಾರರ ಮೇಲೆ ಮಾತ್ರವಲ್ಲದೆ, ಉತ್ಪಾದನೆ, ಸಾರಿಗೆ ಇತರ ಕ್ಷೇತ್ರಗಳ ಮೇಲೆಯೂ ಪರಿಣಾಮ ಉಂಟಾಗಿದೆ. ಇಂಧನ ಬೆಲೆ ಏರಿಕೆಯಿಂದ ಎಲ್ಲವು ದುಬಾರಿಯಾಗಿದ್ದು, ಆರ್ಥಿಕತೆಯ ಮೇಲೆ ಬಹುದೊಡ್ಡ ಪರಿಣಾಮ ಬೀರಿವೆ. ಇದರ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆ ಸಾಧಿಸಿ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೊರೋನಾ ಸಾಂಕ್ರಮಿಕ ರೋಗದ ನಡುವೆ ಆದಾಯ ಹೆಚ್ಚಳಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಇದೆ. ಆದರೆ ದೇಶದ ಜನ ಸಂಕಷ್ಟದಿಂದ ಹೊರಬರಲು ಸರ್ಕಾರಗಳು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.