
ನವದೆಹಲಿ: ಕೇಂದ್ರದ ತೆರಿಗೆಯಲ್ಲಿ ರಾಜ್ಯಗಳ ಪಾಲಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಜ್ಯಕ್ಕೆ 3467 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಎರಡು ಕಂತಿನ ಹಣ ಒಂದೇ ಬಾರಿ ಕರ್ನಾಟಕಕ್ಕೆ ಬಿಡುಗಡೆ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೆ 95 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಮಾಡಲಾಗಿದ್ದು, ಪ್ರತಿ ಬಾರಿ ಸಾಮಾನ್ಯವಾಗಿ 47 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುತ್ತದೆ. ಈಗ ಒಂದೇ ಬಾರಿಗೆ 95 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.