ನವದೆಹಲಿ: ಕರ್ನಾಟಕ ಸೇರಿದಂತೆ 16 ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಲಾಗುವುದು. ರಾಜ್ಯಗಳಿಗೆ ಬರಬೇಕಿರುವ ಜಿಎಸ್ಟಿ ಪರಿಹಾರ ಮೊತ್ತದ ಎರಡನೇ ಕಂತು ಇಂದು ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.
16 ರಾಜ್ಯಗಳು, 3 ಕೇಂದ್ರಾಡಳಿತ ಜಿಎಸ್ಟಿ ಪರಿಹಾರ ಮೊತ್ತದ ಎರಡನೇ ಕಂತನ್ನು ಬಿಡುಗಡೆ ಮಾಡಲಾಗುವುದು. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ಮೊದಲಾದ ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ಟಿ ಪರಿಹಾರ ಮೊತ್ತದ 2 ನೇ ಕಂತು 6 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.