ನವದೆಹಲಿ: ಎಲೆಕ್ಟ್ರಿಕ್ ವೆಹಿಕಲ್ ಬಳಕೆ ಉತ್ತೇಜನಕ್ಕೆ ತೈಲಕಂಪನಿಗಳು ಮಹತ್ವದ ಕ್ರಮ ಕೈಗೊಂಡಿದ್ದು, 22,000 ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಿವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ 7000 ಕೇಂದ್ರಗಳನ್ನು ಆರಂಭಿಸಲಾಗುವುದು. ಹಿಂದೂಸ್ತಾನ್ ಪೆಟ್ರೋಲಿಯಂ 5000, ಇಂಡಿಯನ್ ಆಯಿಲ್ ಕಾರ್ಪೊರೇಷನ್ 10,000 ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಿವೆ. ರಿಲಯನ್ಸ್ ನಿಂದಲೂ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗುವುದು. ಪ್ರಮುಖ ನಗರಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಸ್ಥಾಪಿಸಲಿರುವ ಚಾರ್ಜಿಂಗ್ ಕೇಂದ್ರಗಳಿಗೆ ಎನರ್ಜಿ ಸ್ಟೇಷನ್ ಎಂದು ಹೆಸರಿಡಲಾಗಿದೆ. ಕೇಂದ್ರ ಇಂಧನ ಸಚಿವ ಹರದೀಪ್ ಸಿಂಗ್ ಪುರಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 5 ವರ್ಷಗಳಲ್ಲಿ 22,000 ಚಾರ್ಜಿಂಗ್ ಕೇಂದ್ರಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.