ಚಿತ್ರದುರ್ಗ : ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆ ದಂತ, ಶ್ರೀಗಂಧವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆ ದಂತ, ಶ್ರೀಗಂಧವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆನೆ ದಂತ, ಶ್ರೀಗಂಧ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಕಲೀಲ್ ಎಂಬುವವರನ್ನು ಬಂಧಿಸಿದ್ದಾರೆ.