ಚಿತ್ರದುರ್ಗ: ಸಂಕಷ್ಟದಲ್ಲಿರುವ ರೈತರ ಆಸ್ತಿಯನ್ನು ಬ್ಯಾಂಕ್ ಗಳು ಜಪ್ತಿ ಮಾಡುವುದನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಆಯೋಜಿಸಿದ್ದ ಲಿಂ.ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಅವರು ಮಾತನಾಡಿದರು.
ರೈತರು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಬ್ಯಾಂಕ್ ಗಳು ರೈತರ ಆಸ್ತಿ ಜಪ್ತಿ ಮಾಡುವುದು, ನೋಟಿಸ್ ಜಾರಿ ಮಾಡುವ ಕೆಲಸ ಮಾಡುತ್ತಿದ್ದು, ಇದಕ್ಕೆ ಅಂತ್ಯ ಹಾಡಲು ಕಾನೂನು ತಿದ್ದುಪಡಿ ತರಲಾಗುವುದು. ರೈತರ ಆಸ್ತಿ ಜಪ್ತಿ ಮಾಡುವುದನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.
ಶ್ರೀಗಳ ಪ್ರೇರಣೆ ಪಡೆದು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. ರೈತರ ಮಕ್ಕಳಿಗಾಗಿ ಜಾರಿಗೆ ತಂದ ರೈತ ವಿದ್ಯಾನಿಧಿ ಯೋಜನೆಯನ್ನು ಕೂಲಿ ಕಾರ್ಮಿಕರ ಮಕ್ಕಳು, ನೇಕಾರರು, ಮೀನುಗಾರರು, ರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.