ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.
ಹಾಲಿನ ದರ ಪ್ರತಿ ಲೀಟರ್ ಗೆ 2 ರಿಂದ 3 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ನವೆಂಬರ್ 14ರಂದು ಕೆಎಂಎಫ್ ಹಾಲಿನ ದರ 3 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಆದರೆ ಸಿಎಂ ಸೂಚನೆ ಮೇರೆಗೆ ಅದನ್ನು ದಿಢೀರ್ ವಾಪಸ್ ಪಡೆಯಲಾಗಿತ್ತು.
ಇಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಪದಾಧಿಕಾರಿಗಳು, ಹಾಲು ಒಕ್ಕೂಟಗಳ ಅಧ್ಯಕ್ಷರು ಹಾಲಿನ ದರ ಹೆಚ್ಚಳಕ್ಕೆ ಸಿಎಂಗೆ ಮನವಿ ಮಾಡಲಿದ್ದಾರೆ. ಹಾಲಿನ ದರ ಎರಡರಿಂದ ಮೂರು ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.