ಬೆಂಗಳೂರು: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 4 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ವಿತರಿಸಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೂಡ ನೂತನ ಕೈಗಾರಿಕೆ ನೀತಿಯಲ್ಲಿ ಎಂಎಸ್ಎಂಇಗಳಿಗೆ ಆದ್ಯತೆ ನೀಡಲಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಮಾತನಾಡಿ, ಆರ್ಥಿಕ ಸಂಕಷ್ಟ, ಕೊರೋನಾ ಬಿಕ್ಕಟ್ಟಿನಂತಹ ಸದ್ಯದ ಪರಿಸ್ಥಿತಿಯಲ್ಲಿ ಕೈಗಾರಿಕಾ ಬೆಳವಣಿಗೆ ರಾಜ್ಯ ಸರ್ಕಾರ ಒತ್ತು ನೀಡಲಿದೆ. ಅದರಲ್ಲಿಯೂ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳನ್ನು ಬಲಪಡಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಗೈಮ್ ರಾಷ್ಟ್ರೀಯ ಟಾಸ್ಕ್ ಫೋರ್ಸ್ ಆಯೋಜಿಸಿದ ವರ್ಚುಯೆಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಎಂಎಸ್ಎಂಇ ವಲಯದ ಬೆಳವಣಿಗೆ ಆದ್ಯತೆ ನೀಡಲಾಗುವುದು. ಆರ್ಥಿಕತೆ ಬೆಳವಣಿಗೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ಉದ್ಯಮ ವಲಯದ ಪಾತ್ರ ಪ್ರಮುಖವಾಗಿದೆ. ಪ್ರಧಾನಿಯವರ ಸೂಚನೆಯಂತೆ ರಾಜ್ಯ ಸರ್ಕಾರ ಎಲ್ಲ ಸಹಕಾರ, ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.
ನೂತನ ಕೈಗಾರಿಕಾ ನೀತಿಯನ್ನು ರಾಜ್ಯ ಸರ್ಕಾರ ಪ್ರಕಟಿಸುತ್ತಿದ್ದು, ಅದರಲ್ಲಿ ಸಣ್ಣ ಮತ್ತು ಅತಿ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.