alex Certify BIG NEWS: ಪೆಟ್ರೋಲ್ ತೆರಿಗೆ ಇಳಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೆಟ್ರೋಲ್ ತೆರಿಗೆ ಇಳಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಬಾರಿ ದುಬಾರಿಯಾಗಿರುವುದರಿಂದ ಸೆಸ್ ಇಳಿಕೆ ಮಾಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಆದರೆ, ಬಹುತೇಕ ರಾಜ್ಯಗಳಿಂದ ಸೆಸ್ ಇಳಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೆಟ್ರೋಲ್ ತೆರಿಗೆ ಇಳಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಏನೇ ಮಾಡುವುದಿದ್ದರೂ ಕೇಂದ್ರ ಸರ್ಕಾರವೇ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿಯೂ ಪೆಟ್ರೋಲ್ ದರ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಸಿಎಂ, ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡುವುದಿಲ್ಲ. ಏನೇ ಮಾಡುವುದಿದ್ದರೂ ಕೇಂದ್ರ ಸರ್ಕಾರವೇ ಮಾಡಬೇಕು. ಸದ್ಯ ಸೆಸ್ ಕಡಿಮೆ ಮಾಡುವ ಸ್ಥಿತಿಯಲ್ಲಿ ರಾಜ್ಯಸರ್ಕಾರ ಇಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...