ಅಹಮದಾಬಾದ್: ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಆರ್ಥಿಕ ನೆರವನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆ ಮಾಡುತ್ತಿದ್ದು, ಸಹಕಾರ ಬ್ಯಾಂಕುಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಹಕಾರ ಬ್ಯಾಂಕುಗಳಿಂದಲೂ ನೇರ ನಗದು ವರ್ಗಾವಣೆ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಹಕರ ಜನ್ ಧನ್ ಖಾತೆ, ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ನೇರ ನಗದು ವರ್ಗಾವಣೆ ಮಾಡಲಾಗುತ್ತದೆ ಎಂದರು.
ಫಲಾನುಭವಿಗಳ ಆಧಾರ್ ಸಂಖ್ಯೆ, ಜನ್ ಧನ್ ಖಾತೆ ಮತ್ತು ಮೊಬೈಲ್ ಸಂಖ್ಯೆ ಬಳಸಿಕೊಂಡು 52 ಸಚಿವಾಲಯಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಿ ಮಾಡುತ್ತಿದ್ದು, ಸಹಕಾರಿ ಬ್ಯಾಂಕುಗಳಿಗೆ ಈ ಸೇವೆ ವಿಸ್ತರಿಸಲಾಗುತ್ತದೆ. ಇದರಿಂದ ಜನಸಂಪರ್ಕ ಇನ್ನಷ್ಟು ಹೆಚ್ಚಾಗುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.