ನವದೆಹಲಿ: ಶೀಘ್ರದಲ್ಲೇ ಹೊಸ ಸಹಕಾರ ನೀತಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸರ್ಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
65,000 ದಷ್ಟು ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಮುಂದಿನ ಐದು ವರ್ಷಗಳಲ್ಲಿ ಅವುಗಳ ಸಂಖ್ಯೆಯನ್ನು 3 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಹಕಾರಿ ವಲಯದಲ್ಲಿ ಡಿಜಿಟಲೀಕರಣ, ಆಧುನೀಕರಣಕ್ಕೆ ಒತ್ತು ನೀಡಲಾಗುತ್ತದೆ. ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರ ನೀತಿ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.