alex Certify BIG BREAKING: ಎಲ್ಲಾ ಸಹಕಾರಿ ಸಂಸ್ಥೆ, ಬ್ಯಾಂಕ್ ಚುನಾವಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಎಲ್ಲಾ ಸಹಕಾರಿ ಸಂಸ್ಥೆ, ಬ್ಯಾಂಕ್ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿಯ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್ 31ರವರೆಗೆ ಮುಂದೂಡಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕೃತ ಆದೇಶ ಪ್ರಕಟವಾಗಿದೆ.

ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳ ಚುನಾವಣೆಯನ್ನು ಡಿಸೆಂಬರ್ 2020ರ ವರೆಗೆ ಮುಂದೂಡುವ ಬಗ್ಗೆ ಆಡಳಿತ ಮಂಡಳಿಗಳ ಅವಧಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳುವ ಸಹಕಾರ ಸಂಸ್ಥೆಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಿಸುವ ಬಗ್ಗೆ ಆದೇಶ ಹೊರಡಿಸಿಲಾಗಿದೆ.

ಎಲ್ಲ ಸಹಕಾರ ಸಂಘಗಳ, ಸಹಕಾರ ಬ್ಯಾಂಕುಗಳ ಚುನಾವಣೆಗಳನ್ನು ಮುಂದೂಡಲಾಗಿದ್ದು, ಈಗಾಗಲೇ ಚುನಾವಣಾ ವೇಳಾಪಟ್ಟಿ ಹೊರಡಿಸಿ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದರೆ ಅದನ್ನು ಕೂಡ ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಮಾಡಲಾಗಿದೆ.

ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳುವ ಸಹಕಾರಿ ಸಂಸ್ಥೆಗಳಿಗೆ ಸಹಕಾರ ಸಂಘಗಳ ಕಾಯ್ದೆ ಅನ್ವಯ ಆಡಳಿತ ಅಧಿಕಾರಿಗಳನ್ನು ನೇಮಿಸುವ ನಿಬಂಧಕರು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...