ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮುಂದೂಡಲ್ಪಟ್ಟಿದ್ದ ಸಹಕಾರಿ ಸಂಘಗಳ ಚುನಾವಣೆಗೆ ಸಮಯ ನಿಗದಿಯಾಗಿದೆ.
ನವೆಂಬರ್ 15 ರೊಳಗೆ ಕಡ್ಡಾಯವಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಈ ಕುರಿತಾದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಚುನಾವಣೆ ನಡೆಸಲು ನಿರ್ದೇಶನ ನೀಡಿದೆ. ಅಂತೆಯೇ ಸಹಕಾರ ಚುನಾವಣಾ ಪ್ರಾಧಿಕಾರ ಆಯುಕ್ತರು ಆದೇಶ ಹೊರಡಿಸಿದ್ದು ನವೆಂಬರ್ 15ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.
ಸಕಾಲದಲ್ಲಿ ಚುನಾವಣೆ ಪೂರ್ಣಗೊಳಿಸದಿದ್ದಲ್ಲಿ ಚುನಾವಣಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಪ್ರಾಥಮಿಕ, ಮಾಧ್ಯಮಿಕ ಮತ್ತು ಫೆಡರಲ್ ಸಹಕಾರ ಸಂಘಗಳ ಚುನಾವಣೆ ನಡೆಸಲು ತಿಳಿಸಲಾಗಿದೆ.