ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳದ ಮೊತ್ತವನ್ನು 10 ಲಕ್ಷ ರೂ. ದಿಂದ 20 ಲಕ್ಷ ರೂ. ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸಹಕಾರ ಸಂಘದ ಒಟ್ಟು ಸದಸ್ಯರ ಪೈಕಿ ಪರಿಶಿಷ್ಟ ಜಾತಿಗೆ ಸೇರಿದ ಸದಸ್ಯರು ಶೇ 70 ಹಾಗೂ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗಕ್ಕೆ ಸೇರಿದ ಸದಸ್ಯರ ಸಂಖ್ಯೆ ಶೇ.30 ರಷ್ಟು ಇರಬೇಕು. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯಡಿಯಲ್ಲಿ ಸಹಕಾರ ಸಂಘವು ನೋಂದಣೆಯಾಗಿರಬೇಕು. ಸಹಕಾರ ಸಂಘವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರಬೇಕು. ಕರ್ನಾಟಕದ ಸಹಕಾರ ಸಂಘಗಳ ಕಾಯ್ದೆಯನ್ವಯ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಪಾಲಿಸಬೇಕು.
ಸಹಕಾರ ಸಂಘವು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯನ್ವಯ ವಾರ್ಷಿಕ ವರದಿ ಕಡ್ಡಾಯವಾಗಿ ಪ್ರಕಟಿಸಬೇಕು. ಸಹಕಾರ ಸಂಘದ ಸದಸ್ಯರಿಂದ ಪಾವತಿಯಾದ ಷೇರು ಬಂಡವಾಳದ ಶೇ.50 ರಷ್ಟು ಅಥವಾ ಗರಿಷ್ಟ 20.00 ಲಕ್ಷ ರೂ.ಗಳ ಷೇರು ಬಂಡವಾಳ ರೂಪದಲ್ಲಿ ಸರ್ಕಾರದಿಂದ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.