ನವದೆಹಲಿ: ಸಹಕಾರ ಬ್ಯಾಂಕುಗಳ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಣ ಬಲಪಡಿಸಲು ಬ್ಯಾಂಕಿಂಗ್ ನಿಯಂತ್ರಣ(ತಿದ್ದುಪಡಿ) ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ.
ಸಹಕಾರ ಬ್ಯಾಂಕುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ರಾಜ್ಯ ಸರ್ಕಾರಗಳ ಅಧಿಕಾರವಧಿಯನ್ನು ಇದು ಮೊಟಕು ಗೊಳಿಸಿದಂತಾಗುತ್ತದೆ. ಈ ವಿದೇಯಕ ಸಹಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಪ್ರತಿಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಬ್ಯಾಂಕಿಂಗ್ ನಿಯಂತ್ರಣ ತಿದ್ದುಪಡಿ ಸುಗ್ರೀವಾಜ್ಞೆಯ ಭಾಗವಾಗಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಹಕಾರ ಬ್ಯಾಂಕುಗಳಲ್ಲಿ ಠೇವಣಿದಾರರ ಹಿತದೃಷ್ಟಿಯಿಂದ ಈ ಕಾಯ್ದೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ಅಧಿರ್ ರಂಜನ್ ಚೌಧರಿ ಮತ್ತು ಶಶಿ ತರೂರ್ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಸರ್ಕಾರಗಳ ಅಧಿಕಾರವಧಿಯನ್ನು ಮೊಟಕುಗೊಳಿಸುತ್ತದೆ ಎಂದು ದೂರಿದ್ದಾರೆ.