ಬೆಂಗಳೂರು: ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ನೆರವು ನೀಡುವ ಉದ್ದೇಶದಿಂದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಂಪುಟ ಉಪಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕೊಬ್ಬರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಕೊಬ್ಬರಿಗೆ 1000 ರೂ. ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ.
ಕೇಂದ್ರ ಸರ್ಕಾರ 10,300 ರೂ. ಬೆಂಬಲ ಬೆಲೆ ಘೋಷಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ 1000 ರೂ. ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ. ಕ್ವಿಂಟಾಲ್ ಕೊಬ್ಬರಿಗೆ ತಲಾ 11,300 ರೂ. ಸಿಗಲಿದೆ ಎಂದು ಹೇಳಲಾಗಿದೆ.