ನವದೆಹಲಿ: ಕೇಂದ್ರ ಸರ್ಕಾರ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಗಿರಣಿ ಕೊಬ್ಬರಿ ಪ್ರತಿ ಕ್ವಿಂಟಲ್ ಗೆ 10,860 ರೂ. ನಿಗದಿ ಮಾಡಲಾಗಿದೆ.
ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ ಗೆ 11,750 ರೂ. ದರ ನಿಗದಿ ಮಾಡಲಾಗಿದೆ. ಗಿರಣಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 270 ರೂ. ಹೆಚ್ಚಳ ಮಾಡಲಾಗಿದ್ದು, ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ ಗೆ 750 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಪ್ರಧಾನಿ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ 2023ರ ಋತುವಿಗೆ ಅನ್ವಯವಾಗುವಂತೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ.