alex Certify ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದಲ್ಲಿ ನಿಯಮ 69ರ ಚರ್ಚೆಯಲ್ಲಿ ತೆಂಗು ಮತ್ತು ಕೊಬ್ಬರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿಂದ ಹಾಗೂ ಕನಿಷ್ಟ ಬೆಂಬಲ ಬೆಲೆಯೂ ಸಹ ಕಡಿಮೆಯಾಗುತ್ತಿರುವುದರಿಂದ ಬೆಂಬಲ ಬೆಲೆ ಹೆಚ್ಚಿಸುವ ಬಗ್ಗೆ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ಎಂ.ಟಿ. ಕೃಷ್ಣಪ್ಪ ಮುಂತಾದವರ ಚರ್ಚೆಗೆ   ಉತ್ತರಿಸಿದ ಸಚಿವರು, ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...