ಕೊಬ್ಬರಿ ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಲಾಗಿದೆ.
ಪ್ರತಿ ಕ್ವಿಂಟಲ್ ಕೊಬ್ಬರಿಗೆ 250 ರೂ.ಪ್ರೋತ್ಸಾಹ ಧನ ನೀಡಲಾಗುವುದು. ಸಿಎಂ ಸಿದ್ಧರಾಮಯ್ಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಈ ಬಗ್ಗೆ ಮಾಹಿತಿ ನೀಡಿದ್ದು, ಕೊಬ್ಬರಿಗೆ 1250 ರೂ. ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿ 250 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.