ನವದೆಹಲಿ: ಎಲ್ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 55 ರೂಪಾಯಿ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಬದಲಾವಣೆ ಮಾಡಿಲ್ಲ.
ಜುಲೈನಲ್ಲಿ 14.2 ಕೆಜಿ ಗೃಹ ಬಳಕೆ ಸಿಲಿಂಡರ್ ದರ ಪರಿಷ್ಕರಿಸಿದ್ದು, 4 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಅದಕ್ಕಿಂತ ಹಿಂದೆ ಮೇ ನಲ್ಲಿ 162 ರೂಪಾಯಿ ಕಡಿಮೆ ಮಾಡಲಾಗಿತ್ತು. ಈಗ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 55 ರೂ. ಹೆಚ್ಚಳ ಮಾಡಲಾಗಿದೆ.
19 ಕೆಜಿ ಸಿಲಿಂಡರ್ ಬೆಲೆ 55 ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 1296 ರೂ., ಕೊಲ್ಕತ್ತಾದಲ್ಲಿ 1351 ರೂ., ಚೆನ್ನೈನಲ್ಲಿ 1410 ರೂ., ಮುಂಬೈನಲ್ಲಿ 1244 ರೂಪಾಯಿ ದರ ಇದೆ. 14.2 ಕೆಜಿ ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ದರ 594 ರೂಪಾಯಿ ಇದೆ ಎಂದು ಹೇಳಲಾಗಿದೆ.