alex Certify BIG NEWS: ರಾಜ್ಯದಲ್ಲಿ ಲ್ಯಾಪ್‌ಟಾಪ್, ಟ್ಯಾಬ್ ತಯಾರಿಕೆಗೆ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್ ಕಂಪನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಲ್ಯಾಪ್‌ಟಾಪ್, ಟ್ಯಾಬ್ ತಯಾರಿಕೆಗೆ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್ ಕಂಪನಿ

ಬೆಂಗಳೂರು: ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದ್ದು, ಈ ಬಗ್ಗೆ ಐಟಿ- ಬಿಟಿ, ಎಲೆಕ್ಟ್ರಾನಿಕ್ ಖಾತೆ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರು ಕಂಪನಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿಂದು ಡಿಸಿಎಂ ಅವರ ಮುಂದೆ ಪ್ರಸ್ತಾವನೆ ಇಟ್ಟ ಡಿಕ್ಸನ್‌ ಕಂಪನಿಯ ಕಾರ್ಯಕಾರಿ ಅಧ್ಯಕ್ಷ ಸುನಿಲ್ ವಚಾನಿ, ಅಗತ್ಯವಾದ ಜಾಗ ಹಾಗೂ ಇತರೆ ಅಂಶಗಳ ಬಗ್ಗೆ ಬೇಡಿಕೆ ಇಟ್ಟರು. ಕಂಪನಿಯ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿಸಿಎಂ ಅವರು ಜಮೀನು ಕೊಡುವ ಭರವಸೆ ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣಾ(ಇಎಸ್‌ಡಿಎಂ) ಇಲಾಖೆಯ ವ್ಯಾಪ್ತಿಯಲ್ಲಿ ಈ ಯೋಜನೆ ಕಾರ್ಯಗತವಾಗಲಿದೆ. ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ, ಮಿಂಡೇನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು, ರಾಮನಗರ ಜಿಲ್ಲೆಯ ಹಾರೋಹಳ್ಳಿ; ಇವಿಷ್ಟೂ ಜಾಗಗಳ ಪೈಕಿ ಯಾವುದಾದರೂ ಒಂದು ಸ್ಥಳದಲ್ಲಿ ತಯಾರಿಕಾ ಘಟಕವನ್ನು ಡಿಕ್ಸನ್‌ ಕಂಪನಿ ಸ್ಥಾಪನೆ ಮಾಡಲು ಜಮೀನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಕಂಪನಿಯು 10 ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್‌ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಗೆ ಮೇಲೆ ತಿಳಿಸಿದ ಯಾವುದೇ ಜಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರ್ಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆಯೂ ಕಂಪನಿಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸುಮಾರು 30 ಸಾವಿರ ಕೋಟಿ ರೂ.ಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಡಿಕ್ಸನ್‌ ಕಂಪನಿಯು; ಲ್ಯಾಪ್‌ಟಾಪ್‌, ಟ್ಯಾಬ್‌, ಡೆಸ್ಟಾಪ್‌, ಸಿಎಫ್‌ಎಲ್ ಬಲ್ಬ್ ಗಳು, ಎಲ್‌ಇಡಿ ಟೀವಿಗಳು, ಸಿಸಿಟಿವಿ, ವಾಷಿಂಗ್‌ ಮಷಿನ್‌ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್‌ ಲಾಲ್‌, ಐಟಿ- ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...