
ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಹಬ್ಬ ದಸರಾ ಹಬ್ಬದ ಹೊತ್ತಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ಆಮದು ಸುಂಕ ರದ್ದು ಮಾಡಲಾಗಿದೆ.
ಕೇಂದ್ರ ಸರ್ಕಾರ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಆಮದು ಸುಂಕವನ್ನು ಮಾರ್ಚ್ 31 ರವರೆಗೆ ರದ್ದು ಮಾಡಿದೆ.
ಪರಿಷ್ಕೃತ ದರಗಳು ಗುರುವಾರದಿಂದ ಜಾರಿಗೆ ಬರಲಿವೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಮಾಹಿತಿ ನೀಡಿದೆ. ಇದರೊಂದಿಗೆ ಕೃಷಿ ಸೆಸ್ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಕಚ್ಚಾ ತಾಳೆ ಎಣ್ಣೆ ಮೇಲಿನ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ ಶೇಕಡ 7.5 ರಷ್ಟಕ್ಕೆ, ಸೂರ್ಯಕಾಂತಿ ಎಣ್ಣೆಗಳ ಮೇಲಿನ ಸೆಸ್ ಅನ್ನು ಶೇಕಡ 5 ಕ್ಕೆ ಇಳಿಕೆ ಮಾಡಲಾಗಿದೆ.