ನವದೆಹಲಿ: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲಿ ಅಡುಗೆ ಎಣ್ಣೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಶೇಕಡ 90 ರಷ್ಟು ಸೂರ್ಯಕಾಂತಿ ಎಣ್ಣೆ ಈ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಹಾಗಾಗಿ ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟಿನ ಪರಿಣಾಮ ಭಾರತದಲ್ಲಿ ಅಡುಗೆ ಎಣ್ಣೆ ದರ ಏರಿಕೆಯಾಗಲಿದೆ.
ಉಕ್ರೇನ್ ಮತ್ತು ರಷ್ಯಾ ದೇಶಗಳು ಸೂರ್ಯಕಾಂತಿ ಎಣ್ಣೆ ಉತ್ಪಾದನೆ ಮತ್ತು ರಫ್ತು ಮಾಡುವಲ್ಲಿ ಮುಂಚೂಣಿಯಲ್ಲಿವೆ. ಇವೆರಡು ದೇಶಗಳ ಯುದ್ಧದಿಂದಾಗಿ ಅಡುಗೆ ಎಣ್ಣೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ರಷ್ಯಾ ಮತ್ತು ಉಕ್ರೇನ್ ನಿಂದ ಶೇಕಡ 90ರಷ್ಟು ಸೂರ್ಯಕಾಂತಿ ಎಣ್ಣೆಯನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. ವಾರ್ಷಿಕ 25 ಲಕ್ಷ ಟನ್ ಅಡುಗೆ ಎಣ್ಣೆ ಬಳಕೆಯಾಗುತ್ತದೆ. ಇದರಲ್ಲಿ 50 ಸಾವಿರ ಟನ್ ಮಾತ್ರ ದೇಶೀಯವಾಗಿ ಉತ್ಪಾದನೆಯಾಗಲಿದೆ. ಉಳಿದ ಎಣ್ಣೆಯನ್ನು ಆಮದು ಮಾಡಿಕೊಳ್ಳಲಾಗುವುದು ಎನ್ನಲಾಗಿದೆ.