ನವದೆಹಲಿ: ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರದಲ್ಲಿ 15 ರೂಪಾಯಿಯಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಖಾದ್ಯತೈಲ ಚಿಲ್ಲರೆ ದರ ಇಳಿಕೆಯನ್ನು ಖಾತರಿಪಡಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಕೇಂದ್ರ ಸರ್ಕಾರ ಈಗಾಗಲೇ ಕಚ್ಚಾ ಸೂರ್ಯಕಾಂತಿ ಎಣ್ಣೆ, ಕಚ್ಚಾ ತಾಳೆ ಎಣ್ಣೆ ಮತ್ತು ಕಚ್ಚಾ ಸೋಯಾಬಿನ್ ಎಣ್ಣೆಯ ಮೇಲಿನ ಆಮದು ಸುಂಕವನ್ನು ತೆಗೆದಿರುವುದರಿಂದ ಗ್ರಾಹಕರಿಗೆ ಕಂಪನಿಗಳು ಲಾಭವನ್ನು ವರ್ಗಾಯಿಸಬೇಕಿದೆ. ಗ್ರಾಹಕರಿಗೆ ಇದರ ಪ್ರಯೋಜನ ಸಿಗುವಂತಾಗಲು ರಾಜ್ಯ ಸರ್ಕಾರಗಳು ಗಮನಹರಿಸಬೇಕೆಂದು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.