ನವದೆಹಲಿ: ಕೊರೊನಾ ನಡುವೆಯೂ ಈ ವರ್ಷ ಉತ್ತಮ ಬೆಳೆ ನಿರೀಕ್ಷಿಸಲಾಗಿದೆ. ದೇಶದ ಹಲವೆಡೆ ಭಾರಿ ಮಳೆ, ಪ್ರವಾಹ ಪರಿಸ್ಥಿತಿ, ಕೊರೊನಾ ಸಂಕಷ್ಟದ ನಡುವೆಯೂ ಈ ವರ್ಷ ಉತ್ತಮ ಮುಂಗಾರು ಮಳೆಯಾಗಿ ಉತ್ತಮ ಬೆಳೆ ನಿರೀಕ್ಷಿಸಲಾಗಿದೆ.
1082 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕಿಂತ ಶೇಕಡ 7 ರಷ್ಟು ಹೆಚ್ಚಾಗಿದೆ. ನಾನಾ ವಲಯಗಳು ಕೊರೊನಾದಿಂದ ಸಂಕಷ್ಟಕ್ಕೆ ಈಡಾಗಿದ್ದರೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿಲ್ಲ. ಕೃಷಿ ಚಟುವಟಿಕೆಗಳು ಹೆಚ್ಚಾಗಿದ್ದು ಕೇಂದ್ರ ಸಚಿವಾಲಯದ ಮಾಹಿತಿಯ ಪ್ರಕಾರ ಈ ವರ್ಷ ದಾಖಲೆ ಪ್ರಮಾಣದಲ್ಲಿ ಆಹಾರ ಧಾನ್ಯ ಉತ್ಪಾದನೆ ನಿರೀಕ್ಷೆ ಮಾಡಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಮಾತನಾಡಿ, ಆಹಾರ ಬೆಳೆ ಉತ್ಪಾದನೆ ಗುರಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.