ಮುಂಬೈ: ಕೊರೋನಾ ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಅನುಕೂಲವಾಗುವಂತೆ ಕಳೆದ ಮಾರ್ಚ್ ನಲ್ಲಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಸರ್ಕಾರ ಮತ್ತೊಂದು ಆರ್ಥಿಕ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ.
ಕೊರೊನಾ ಸೋಂಕು ಕಡಿಮೆಯಾದ ನಂತರದಲ್ಲಿ ಕೇಂದ್ರ ಸರ್ಕಾರ ಎರಡನೇ ಹಂತದ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿ ಹೇಳಿದ್ದಾರೆ.
ಕುಸಿದ ಆರ್ಥಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮುಂದಿನ ಹಂತದ ಆರ್ಥಿಕತೆ ಚೇತರಿಕೆಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ನೆರವಿನ ಪ್ಯಾಕೇಜ್ ನೀಡಲು ರೆಡಿಯಾಗುತ್ತಿದೆ ಎಂದು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಟಿ.ವಿ. ಸೋಮನಾಥನ್ ಮಾಹಿತಿ ನೀಡಿದ್ದಾರೆ.
ಕೊರೋನಾ ಕಾರಣದಿಂದ ದೇಶದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು ಸರ್ಕಾರದ ಮೇಲೆ ಒತ್ತಡ ಸೃಷ್ಟಿಯಾಗಿದೆ. ಇದರಿಂದಾಗಿ ವಿಶೇಷ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.