alex Certify ಕೊರೋನಾ ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್…?

ನವದೆಹಲಿ: ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕತೆಗೆ ತೀವ್ರ ಪೆಟ್ಟು ಬಿದ್ದಿದೆ. ನಷ್ಟವಾಗಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಹೆಚ್ಚುವರಿ ಸಂಪನ್ಮೂಲ ಸಂಗ್ರಹಕ್ಕೆ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಮೇಲೆ ಕೊರೋನಾ ಸೆಸ್ ಹಾಕಲು ಚಿಂತನೆ ನಡೆಸಲಾಗಿದೆ.

2018 ರಲ್ಲಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ್ದ ಕೇರಳ ಸರ್ಕಾರ ಜಿಎಸ್ಟಿ ಮೇಲೆ ವಿಪತ್ತು ಪರಿಹಾರ ಸೆಸ್ ವಿಧಿಸುತ್ತಿದೆ. ಅದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಕರೋನಾ ವೈರಸ್ ಸೆಸ್ ಹಾಕಲು ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ.

ಸರಕು ಮತ್ತು ಸೇವಾ ತೆರಿಗೆ ಮೇಲೆ ಕೇಂದ್ರದಿಂದ ಕೊರೋನಾ ಸೆಸ್ ಹಾಕಲಾಗುವುದು. ಸಂಪನ್ಮೂಲ ಸಂಗ್ರಹಕ್ಕೆ ಇಂತಹ ಕ್ರಮ ಅನಿವಾರ್ಯ ಎಂಬ ಚರ್ಚೆಗಳು ನಡೆದಿವೆ. ಶೇಕಡ 5 ರ ಜಿಎಸ್ಟಿ ಸ್ಲಾಬ್ ಹೊರತುಪಡಿಸಿ ಉಳಿದ ಸ್ಲಾಬ್ ಸೆಸ್ ಮೇಲೆ ವಿಧಿಸುವ ಮೂಲಕ ಸಂಪನ್ಮೂಲ ಸಂಗ್ರಹಕ್ಕೆ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ. ಮುಂದಿನ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೊದಲೇ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಜನಸಾಮಾನ್ಯರು, ಉದ್ಯಮ ವಲಯಕ್ಕೆ ಇದರಿಂದ ಮತ್ತಷ್ಟು ಹೊರೆಯಾಗಲಿದೆ. ಕೊರೋನಾ ವಿಕೋಪ ಸೆಸ್ ಹಾಕುವುದು ಸರಿಯಾದ ಕ್ರಮವಲ್ಲ ಎಂಬ ಅಭಿಪ್ರಾಯ ಕೇಳಿ ಬಂದ ಹಿನ್ನೆಲೆಯಲ್ಲಿ ವಿಸ್ತೃತ ಚರ್ಚೆ ಬಳಿಕ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...